ॐ
ಅಯ್ಯಾ, ನಿಮ್ಮ ಶರಣರ ದಾಸೋಹಕ್ಕೆ ತನುಮನಧನವಲಸದಂತೆ ಮಾಡಯ್ಯಾ,
ತನು ದಾಸೋಹಕ್ಕೆ ಉಬ್ಬುವಂತೆ ಮಾಡಯ್ಯಾ, ಮನ ದಾಸೋಹಕ್ಕೆ ಲೀಯವಹಂತೆ ಮಾಡು,
ಧನ ದಾಸೋಹಕ್ಕೆ ಸವೆದು ನಿಮ್ಮ ಶರಣರ ಪ್ರಸಾದದಲ್ಲಿ ನಿರಂತರ ಆಡಿ, ಹಾಡಿ, ನೋಡಿ,
ಕೂಡಿ, ಭಾವಿಸಿ, ಸುಖಿಸಿ, ಪರಿಣಾಮಿಸುವಂತೆ ಮಾಡು ಕೂಡಲಸಂಗಮದೇವಾ.
Thoughts & Reflections
0No reflections shared yet. Be the first to share your thoughts!