Bhasaka
← Back to home

ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ

Author: ಬಸವಣ್ಣCategory: ವಚನಗಳು
ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ಞಾನವೆಂಬ ವಾಹನವಾಗಿರ್ದೆ ಕಾಣಾ. ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ ಕಾಣಾ. ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಷಭನೆಂಬ ವಾಹನವಾಗಿರ್ದೆ ಕಾಣಾ, ಅಯ್ಯಾ, ನೀನೆನ್ನ ಭವವ ಕೊಂದೆಹೆನೆಂದು ಜಂಗಮಲಾಂಛನವಾಗಿ ಬಂದಡೆ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ.

Thoughts & Reflections

0

No reflections shared yet. Be the first to share your thoughts!

Share your thought