Bhasaka
← Back to home

ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ,

Author: ಬಸವಣ್ಣCategory: ವಚನಗಳು
ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ, ಮಥನಿಸಿ ತೋರುವರಿಲ್ಲದನ್ನಕ್ಕರ ಕಾಣಬಹುದೆ ಜಗದೊಳಗೆ ಕೂಡೆ ಪರಿಪೂರ್ಣ ಶಿವನೆಂದಡೆ ಅಂತರಂಗದಲ್ಲಿ ಕಾಣಬಹುದೆ ಆದಿ ಲಿಂಗ ಅನಾದಿ ಶರಣನ ಭೇದವ ತಿಳುಹಿ, ನಿಜಪ್ರಾಣದೊಳಗಿಪ್ಪ ಸುಜ್ಞಾನಲಿಂಗವ ಕರಸ್ಥಲಕ್ಕೆ ತಂದು, ಆ ಕರಸ್ಥಲದ ಲಿಂಗವನೆನ್ನ ಸರ್ವಾಂಗದೊಳಗೆ ಪ್ರತಿಷ್ಠಿಸಿ ತೋರಿ, ನಿತ್ಯ ನಿಜಲಿಂಗೈಕ್ಯವಹ ಹೊಲಬಿನ ಹರಿಬ ತೋರಿ, ಮತ್ರ್ಯಲೋಕದೊಳಗೆಲ್ಲಾ ಇಂದು ಮೊದಲಾಗಿ ಪ್ರಾಣಲಿಂಗದ ಘನವ ಹರಹಿ ಶಿವಭಕ್ತಿಯನುದ್ಧರಿಸಿದನು. ಕೂಡಲಸಂಗಮದೇವರಲ್ಲಿ, ಚೆನ್ನಬಸವಣ್ಣನೆನ್ನನಾಗುಮಾಡಿ ಉಳುಹಿದನಾಗಿಇನ್ನು ಮತ್ರ್ಯಲೋಕಕ್ಕೆ ಬಂದಡೆ ಚೆನ್ನಬಸವಣ್ಣನ ಪಾದದಾಣೆ.

Thoughts & Reflections

0

No reflections shared yet. Be the first to share your thoughts!

Share your thought