Bhasaka
← Back to home

ಅಂದಣವನೇರಿದ ಸೊಣಗನಂತೆ

Author: ಬಸವಣ್ಣCategory: ವಚನಗಳು
ಅಂದಣವನೇರಿದ ಸೊಣಗನಂತೆ ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು. ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು, ಮೃಡ ನಿಮ್ಮನನುದಿನ ನೆನೆಯಲೀಯದು. ಎನ್ನೊಡೆಯ ಕೂಡಲಸಂಗಮದೇವಾ ನಿಮ್ಮ ಚರಣವ ನೆನೆವಂತೆ ಕರುಣಿಸು- ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ.

Thoughts & Reflections

0

No reflections shared yet. Be the first to share your thoughts!

Share your thought