Bhasaka
← Back to home

ರಾಮ ಎಂಬುವ ಎರಡು

Author: ಪುರಂದರದಾಸCategory: ಶ್ರೀರಾಮRaaga: ಯಮನ್Taala: ಝಪತಾಲ
ರಾಮ ಎಂಬುವ ಎರಡು ಅಕ್ಷರದ ಮಹಿಮೆಯನು ಪಾಮರರು ತಾವೇನು ಬಲ್ಲರಯ್ಯ || 'ರಾ' ಎಂದ ಮಾತ್ರದೊಳು ರಕ್ತ ಮಾಂಸದೊಳಿದ್ದ ಆಯಸ್ಥಿಗತವಾದ ಅತಿ ಪಾಪವನ್ನು | ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ ದಾಯವನು ವಾಲ್ಮೀಕಿ ಮುನಿರಾಯ ಬಲ್ಲ|| ಮತ್ತೆ 'ಮ' ಎಂದೆನಲು ಹೊರಬಿದ್ದ ಪಾಪಗಳು ಒತ್ತಿ ಒಳಪೊಗದಂತೆ ಕವಾಟವಾಗಿ | ಚಿತ್ತ ಕಾಯಗಳ ಪವಿತ್ರ ಮಾಡುವ ಪರಿಯ ಭಕ್ತವರ ಹನುಮಂತನೊಬ್ಬ ತಾ ಬಲ್ಲ || ಧರೆಯೊಳೀ ನಾಮಕ್ಕೆ ಸರಿಮಿಗಿಲು ಇಲ್ಲೆಂದು ಪರಮ ವೇದಗಳೆಲ್ಲ ಪೊಗಳುತಿಹವು | ಸಿರಿಯರಸ ಪುರಂದರ ವಿಟ್ಠಲನ ನಾಮವನು ಸಿರಿಕಾಶಿಯೊಳಗಿಪ್ಪ ಶಿವನು ತಾ ಬಲ್ಲ ||

Thoughts & Reflections

0

No reflections shared yet. Be the first to share your thoughts!

Share your thought