ॐ
ಅರ್ಥ ಪ್ರಾಣ ಅಭಿಮಾನವ ಕೊಟ್ಟೆನೆಂಬರಲ್ಲದೆ ಕೊಟ್ಟ ಭಕ್ತರನಾರನೂ ಕಂಡುದಿಲ್ಲ;
ದಾಸ ತನ್ನ ವಸ್ತ್ರವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ, ಸಿರಿಯಾಳ ತನ್ನ ಮಗನ
ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ, ಬಲ್ಲಾಳ ತನ್ನ ವಧುವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ.
ಇವೆಲ್ಲ ಹೊರಗಣ ಮಾತು, ಕೂಡಲಸಂಗಮದೇವರಲ್ಲಿ ತನ್ನ ಕೊಟ್ಟ ಸಿಂಧುಮರಾಳ.
Thoughts & Reflections
0No reflections shared yet. Be the first to share your thoughts!