Bhasaka
← Back to home

ರಾಮ ಮಂತ್ರವ ಜಪಿಸೋ

Author: ಪುರಂದರದಾಸCategory: ಶ್ರೀರಾಮRaaga: ಜೋನ್‌ಪುರೀTaala: ತ್ರಿತಾಲ
ರಾಮಮಂತ್ರವ ಜಪಿಸೋ ಹೇ ಮನುಜಾ || ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡಬೇಡ ಸೋಮಶೇಖರ ತನ್ನ ಭಾಮಿನಿಗೊರೆದಿಹ || ಕುಲಹೀನನಾದರೂ ಕೂಗಿ ಜಪಿಸುವ ಮಂತ್ರ ಸರಿವ ಭೀತಿಯೊಳು ಉಚ್ಚರಿಪ ಮಂತ್ರ | ಹಲವು ಪಾಪಂಗಳ ಹದಗೆಡಿಸುವ ಮಂತ್ರ ಸುಲಭದಿಂದಲಿ ಸ್ವರ್ಗ ಸೂರೆಗೊಳ್ಳುವ ಮಂತ್ರ || ಸಕಲ ವೇದಗಳಿಗೆ ಸಾರವೆನಿಪ ಮಂತ್ರ ಮುಕುತಿ ಮಾರ್ಗಕೆ ಇದೇ ಮೂಲಮಂತ್ರ | ಭಕುತಿರಸಕೆ ಭವ್ಯ ಮಾರ್ಗ ತೋರುವ ಮಂತ್ರ ಸುಖನಿಧಿ ಪುರಂದರವಿಟ್ಠಲನ ಮಹಾಮಂತ್ರ ||

Thoughts & Reflections

0

No reflections shared yet. Be the first to share your thoughts!

Share your thought