Bhasaka
← Back to home

ವಂದಿಸುವದಾದಿಯಲಿ ಗಣನಾಥನ

Author: ಪುರಂದರದಾಸCategory: ಶ್ರೀಗಣೇಶ
ವಂದಿಸುವದಾದಿಯಲಿ ಗಣನಾಥನ | ಸಂದೇಹ ಸಲ್ಲ ಶ್ರೀ ಹರಿಯಾಜ್ಞೆಯಿದಕುಂಟು || ಹಿಂದೆ ರಾವಣ ತಾನು ವಂದಿಸದೆ ಗಜಮುಖನ ನಿಂದು ತಪವನು ಕೈದು ವರ ಪಡೆಯಲು ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ ತಂದ ವರಗಳನೆಲ್ಲ ಧರೆಗೆ ಇಳಿಸಿದನು ||೧|| ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ ಮುಂದೆ ಗಣಪನ ಪೂಜಿಸೆಂದು ಪೇಳೆ ಒಂದೇ ಮನದಲಿ ಬಂದು ಪೂಜಿಸಲು ಗಣನಾಥ ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು ||೨|| ಇಂದು ಜಗವೆಲ್ಲ ಉಮೆನಂದನನ ಪೂಜಿಸಲು ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು ತಂದೆ ಸಿರಿಪುರಂದರವಿಠಲನ ಸೇವೆಯೊಳು ಬಂದ ವಿಘ್ನವ ಕಳೆದಾನಂದವನು ಕೊಡುವ ||೩||

Thoughts & Reflections

0

No reflections shared yet. Be the first to share your thoughts!

Share your thought