Bhasaka
← Back to home

ಅಂತರಂಗದೊಳಗಿಲ್ಲ ಬಹಿರಂಗದೊಳಗಿಲ್ಲ

Author: ಅಲ್ಲಮ ಪ್ರಭುCategory: ಶ್ರೀಶಿವ
ಅಂತರಂಗದೊಳಗಿಲ್ಲ ಬಹಿರಂಗದೊಳಗಿಲ್ಲ ಮತ್ತಾವ ದೆಶೆ ದಿಕ್ಕಿನೊಳಗೆಯೂ ಇಲ್ಲ. ಏನಾಯಿತ್ತೆಂದರಿಯೆ ಎಂತಾಯಿತ್ತೆಂದರಿಯೆ ಅದೆಂತೆಂದರೆ: "ಅಂತಃ ಶೂನ್ಯಂ ಬಹಿಃಶೂನ್ಯಂ ಶೂನ್ಯಂ ಶೂನ್ಯಂ ದಿಶೌ ದಿಶೌ! ಸರ್ವಶೂನ್ಯಂ ನಿರಾಲಂಬಂ ನಿದ್ರ್ವಂದ್ವಂ ಪರಮಂ ಪದಂ" ಎಂಬುದಾಗಿ-ಅಲ್ಲಿ ಇಲ್ಲಿ ಎಲ್ಲಿಯೂ ಇಲ್ಲ. ಗುಹೇಶ್ವರ ಬಯಲು

Thoughts & Reflections

0

No reflections shared yet. Be the first to share your thoughts!

Share your thought