Bhasaka
← Back to home

ಅದ್ವೈತವ ನುಡಿದು

Author: ಅಲ್ಲಮ ಪ್ರಭುCategory: ಶ್ರೀಶಿವ
ಅದ್ವೈತವ ನುಡಿದು ಅಹಂಕಾರಿಯಾದೆನಯ್ಯಾ. ಬ್ರಹ್ಮವ ನುಡಿದು ಭ್ರಮಿತನಾದೆನಯ್ಯಾ. ಶೂನ್ಯವ ನುಡಿದು ನಾನು ಸುಖದುಃಖಕ್ಕೆ ಗುರಿಯಾದೆನಯ್ಯಾ. ಗುಹೇಶ್ವರಾ ನಿಮ್ಮ ಶರಣ ಸಂಗನಬಸವಣ್ಣನ ಸಾನ್ನಿಧ್ಯದಿಂದ ನಾನು ಸದ್ಭಕ್ತನಾದೆನಯ್ಯಾ

Thoughts & Reflections

0

No reflections shared yet. Be the first to share your thoughts!

Share your thought