Bhasaka
← Back to home

ಏಳು ನಾರಾಯಣ ಏಳು ಲಕ್ಷ್ಮೀರಮಣ

Author: ಕನಕದಾಸCategory: ಶ್ರೀಕೃಷ್ಣRaaga: ಉದಯರಾಗTaala: ಝಂಪೆತಾಳ
ಏಳು ನಾರಾಯಣ ಏಳು ಲಕ್ಷ್ಮೀರಮಣ ಏಳು ಶ್ರೀಗಿರಿಯೊಡೆಯ ವೆಂಕಟೇಶ ಏಳಯ್ಯ ಬೆಳಗಾಯಿತು ||ಪ|| ಕಾಸಿದ್ದ ಹಾಲುಗಳ ಕಾವಡಿಯಲಿ ತುಂಬಿ ಲೇಸಾಗೆ ಹಾಲ್ಮೊಸರು ಬೆಣ್ಣೆಯಾ ಕಡೆದು ಶೇಷಶಯನನೆ ಏಳು ಸಮುದ್ರ ಮಥನವ ಮಾಡು ದೇಶ ಕೆಂಪಾಯಿತು ಏಳಯ್ಯ ಹರಿಯೆ ||1|| ಅರಳುಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳ ಸುರರು ಸುಜನರೆಲ್ಲ ತಂದಿಹರು ಅರವಿಂದ ಲೋಚನ ಮದನ ಗೋಪಾಲ ಕೃಷ್ಣ ನೆರೆ ಕೋಳಿ ಕೂಗಿತು ಏಳಯ್ಯ ಹರಿಯೆ ||2|| ದಾಸರೆಲ್ಲರು ಬಂದು ದೂಳಿದರ್ಶನಗೊಂಡು ಲೇಸಾಗಿ ತಾಳದಂಡಿಗೆ ಪಿಡಿದು ಶ್ರೀಶಾದಿಕೇಶವನೆ ನಿನ್ನ ನಾಮವ ಸ್ಮರಿಸಿ ಏಸೊಂದು ಸ್ತೋತ್ರವಗೈಯುತಿಹರೇಳಯ್ಯ ||3||

Thoughts & Reflections

0

No reflections shared yet. Be the first to share your thoughts!

Share your thought