Bhasaka
← Back to home

ಎನಗೂ ಆಣೆ

Author: ಪುರಂದರದಾಸCategory: ಶ್ರೀಕೃಷ್ಣRaaga: ಕೇದಾರಾTaala: ತ್ರಿತಾಳ
ಎನಗೂ ಆಣೆ ರಂಗ ನಿನಗೂ ಆಣೆ | ಎನಗೂ ನಿನಗೂ ಇಬ್ಬರಿಗೂ ನಿನ್ನ ಭಕ್ತರಾಣೆ || ನಿನ್ನ ಬಿಟ್ಟು ಅನ್ಯರ ಭಜಿಸಿದರೆನಗೆ ಆಣೆ | ರಂಗ ಎನ್ನ ನೀ ಕೈಬಿಟ್ಟು ಪೋದರೆ ನಿನಗೆ ಆಣೆ || ತನುಮನಧನದಲಿ ವಂಚಕನಾದರೆ ಎನಗೆ ಆಣೆ | ರಂಗ ಮನಸು ನಿನ್ನಲಿ ನಿಲಿಸದಿದ್ದರೆ ನಿನಗೆ ಆಣೆ || ಕಾಕು ಮನುಜರ ಸಂಗವ ಮಾಡಿದರೆನಗೆ ಆಣೆ | ರಂಗ ಲೌಕಿಕವ ಬಿಡಿಸದಿದ್ದರೆ ನಿನಗೆ ಆಣೆ || ಶಿಷ್ಟರ ಸಂಗವ ಮಾಡದಿದ್ದರೆ ಎನಗೆ ಆಣೆ | ರಂಗ ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ || ಹರಿ ನಿನ್ನಾಶ್ರಯ ಮಾಡದಿದ್ದರೆ ಎನಗೆ ಆಣೆ | ರಂಗ ಪುರಂದರವಿಟ್ಠಲ ನೀನೊಲಿಯದಿದ್ದರೆ ನಿನಗೆ ||

Thoughts & Reflections

0

No reflections shared yet. Be the first to share your thoughts!

Share your thought