Bhasaka
← Back to home

ಅನ್ಯಚಿಂತೆಯ ಪಥದಿ

Author: ವಚನವೇದCategory: ಶ್ರೀಗುರುRaaga: ಪೂರ್ವೀTaala: ಝಪತಾಲ
ಅನ್ಯಚಿಂತೆಯ ಪಥದಿ ಮನವಲೆದು ಸಾಗಿರಲು ನಿನ್ನ ದರ್ಶನ ನನ್ನ ನಾಚಿಸಿಹುದು || ಜೀವನದ ಜಲಧಿಯಲಿ ಪಯಣಗೈಯುವ ನನಗೆ ನೀನೊಂದು ಧ್ರುವತಾರೆ ನನ್ನ ಗುರುವೆ | ಕಡೆಯಿಲ್ಲದೀ ಕಡಲ ಬಳಸುದಾರಿಯೊಳಾನು ದಿಕ್ಕು ತಪ್ಪದೆ ಇನ್ನು ಪಯಣಗೈವೆ || ಇಲ್ಲಿ ನಾನಲೆವಾಗ ಎಂದಾದರೂ ನನ್ನ ಎದೆಯು ಮಿಡುಕಾಡುತಿರೆ ನೋವಿನಲ್ಲಿ | ಮೇಲೆ ನಿನ್ನಯ ಕರುಣಕಾಂತಿಯುಜ್ವಲ ತಾರೆ ಬೆಳಗಿ ಸಂತೈಸುವುದು ಹಾದಿಯಲ್ಲಿ || ನನ್ನಂತರಂಗದಲಿ ನಿನ್ನ ಮುಖವೆಂದಿಗೂ ಚಿರಮಧುರ ಕಾಂತಿಯಲಿ ಶೋಭಿಸಿಹುದು | ಒಂದೆ ಚಣ ನಾ ನಿನ್ನ ಕಾಣದಿದ್ದರೆ ಎದೆಯು ಅತುಲ ವೇದನೆಯಲ್ಲಿ ತುಡಿಯುತಿಹುದು ||

Thoughts & Reflections

0

No reflections shared yet. Be the first to share your thoughts!

Share your thought