Bhasaka
← Back to home

ಏನು ಮಾಡಿದರೇನು

Author: ಪುರಂದರದಾಸCategory: ಶ್ರೀಕೃಷ್ಣRaaga: ಭೈರವೀTaala: ಝಪತಾಲ
ಏನು ಮಾಡಿದರೇನು ಭವ ಹಿಂಗದು ಸ್ವಾಮಿ ದಾನವಾಂತಕ ನಿನ್ನ ದಯವಾಗದನಕ || ಅರುಣೋದಯದೊಳೆದ್ದು ಅತಿಸ್ನಾನಗಳ ಮಾಡಿ ಬೆರಳೆಣಿಸಿದೆ ಅದರ ನಿಜವರಿಯದೆ | ಚರಣ ಸಾಷ್ಟಾಂಗವನು ಮಾಡಿ ನಾ ದಣಿದೆನೋ ಹರಿ ನಿನ್ನ ಕರುಣಾಕಟಾಕ್ಷವಾಗದನಕ || ಶ್ರುತಿ ಶಾಸ್ತ್ರ ಪುರಾಣಗಳನೋದಿ ಬೆಂಡಾದೆ ಅತಿ ಶೀಲಗಳನೆಲ್ಲ ಮಾಡಿ ದಣಿದೆ | ಗತಿಯ ಪಡೆಯುವೆನೆಂದು ಕಾಯ ದಂಡಿಸಿದೆನೋ ರತಿಪತಿಪಿತ ನಿನ್ನ ದಯವಾಗದನಕ || ಧ್ಯಾನವನು ಮಾಡಿದೆನು ಮೌನವನು ತಾಳಿದೆ ಮಹಾನು ಪುರುಷಾರ್ಥಕ್ಕೆ ಮನವನಿಕ್ಕಿ | ಅನಾಥಬಂಧು ಶ್ರೀ ಪುರಂದರವಿಟ್ಠಲನ ಧ್ಯಾನಿಸುವರೊಡಗೂಡಿ ನೆಲೆಗಾಣದನಕ ||

Thoughts & Reflections

0

No reflections shared yet. Be the first to share your thoughts!

Share your thought