Bhasaka
← Back to home

ಅರಿತು ನಡೆಯಲಿ ಬೇಕು

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ಅರಿತು ನಡೆಯಲಿ ಬೇಕು ನರಕಾಯವೆತ್ತಿದ ಮೇಲೆ ಅರಿಯದಿದ್ದರೆ ನರಕವೇ ಪ್ರಾಪ್ತಿ ದುರ್ಜನರ ಮನೆಯ ಪಾಯಸಾನ್ನಕಿಂತ ಸಜ್ಜನರ ಮನೆಯ ರಬ್ಬಳಿಗೆ ಲೇಸು ಹೆಜ್ಜೆಗೆ ಸಾವಿರ ಹೊನ್ನನಿತ್ತರೂ ಬೇಡ - ಬಲು ದುರ್ಜನರ ಸಂಗ ಬಲು ಭಂಗ ಹರಿಯೆ ||1|| ಭಕ್ತಿಹೀನರ ಮನೆಯ ಪಟ್ಟು ಸುಪ್ಪತ್ತಿಗೆಗಿಂತ ಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸು ಮುಕ್ತಿಮಾರ್ಗವ ತೋರ್ಪ ಮುರಹರನ ದಾಸರನು ಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ ||2|| ಆಶೆಕಾರರ ಮನೆಯ ವಿಲಾಸ ಸುಖಕಿಂತ ಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸು ಭೂಸುರಪ್ರಿಯ ಕಾಗಿನೆಲೆಯಾದಿಕೇಶವನ ಮೀಸಲಿನ ಪಾದಭಜನೆ ಕಡುಲೇಸು ಮನವೆ ||3||

Thoughts & Reflections

0

No reflections shared yet. Be the first to share your thoughts!

Share your thought