Bhasaka
← Back to home

ಆರಿಗಾರಿಲ್ಲ ಆಪತ್ಕಾಲದೊಳಗೆ 

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ಝಂಪೆತಾಳ
ಆರಿಗಾರಿಲ್ಲ ಆಪತ್ಕಾಲದೊಳಗೆ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗ ದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗ ಅಸಮಾನನಾದಾಗ ಅತಿ ಭೀತಿಗೊಂಡಾಗ ಬಿಸಜನಾಭನ ನಾಮ ನೆನೆಕಂಡ್ಯ ಮನವೆ ||1|| ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪ ಘಳುಘುಳಿಸುತ ಕೋಪವನು ತೋರಿದಾಗ ಮೇಲು ತಾನರಿಯದಯೆ ನಿಂದೆ ಹೊಂದಿರುವಾಗ ನೀಲಮೇಘಶ್ಯಾಮನ ನೆನೆಕಂಡ್ಯ ಮನವೆ || 2|| ಪಂಥದಲಿರುವಾಗ ಪದವಿ ತಪ್ಪಿರುವಾಗ ದಂತಿಮದವೇರಿ ಬೆನ್ನತ್ತಿದಾಗ ಕಂತುಪಿತ ಕಾಗಿನೆಲೆಯಾದಿಕೇಶವನ ನಿ- ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ ||3||

Thoughts & Reflections

0

No reflections shared yet. Be the first to share your thoughts!

Share your thought