Bhasaka
← Back to home

ಆರು ಬಲ್ಲರು ಹರಿಹರಾದಿಗಳ ಮಹಿಮೆಯನು

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ಝಂಪೆತಾಳ
ಆರು ಬಲ್ಲರು ಹರಿಹರಾದಿಗಳ ಮಹಿಮೆಯನು ||ಪ|| ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ ||ಅ|| ಪೌರತ್ರಯವ ಗೆಲ್ವ ಸಮಯದಲಿ ತಪ ಮಾಡಿ ನಾರಾಯಣಾಸ್ತ್ರವನು ಪಡೆದನೀತ ಗೌರೀಮನೋಹರನ ಘನತರಾರ್ಚನೆಗೈದು ಚಾರುತರ ಚಕ್ರವನು ಪಡೆದನಾ ಶೌರಿ ||1|| ಬಲಿ ಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ ಗಿಲ ಕಾಯ್ದನಚ್ಯುತನು ಅನುಗಾಲದಿ ಬಲು ಭುಜನು ಬಾಣಾಸುರನ ಗೃಹ ದ್ವಾರವನು ಬಳಸಿ ಕಾಯ್ದನು ಹರನು ವರವ ತಾನಿತ್ತು ||2|| ಭೋಗಿಶಯನನು ಆಗಿ ಭೋಗಿಭೂಷಣನಾಗಿ ವಾಗೀಶನಾಗಿ ಸೃಷ್ಟಿ ಸ್ಥಿತಿಲಯ ಕ್ಕಾಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆ ಕಾಗಿನೆಲೆಯಾದಿಕೇಶವನ ಮಹಿಮೆಯನು ||3||

Thoughts & Reflections

0

No reflections shared yet. Be the first to share your thoughts!

Share your thought