Bhasaka
← Back to home

ಆರು ಬಾಳಿದರೇನು ಆರು ಬದುಕಿದರೇನು

Author: ಕನಕದಾಸCategory: ಇತರೆRaaga: ಮೋಹನTaala: ಆಟತಾಳ
ಆರು ಬಾಳಿದರೇನು ಆರು ಬದುಕಿದರೇನು ನಾರಾಯಣನ ಸ್ಮರಣೆ ನಮಗಿಲ್ಲದನಕ ||ಪ|| ಉಣ್ಣಬರದವರಲ್ಲಿ ಊರೂಟವಾದರೇನು ಹಣ್ಣು ಬಿಡದ ಮರಗಳು ಹಾಳಾದರೇನು ಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನು ಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು ||1|| ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನು ಹೊಕ್ಕು ನಡೆಯದ ನಂಟತನದೊಳೇನು ರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನು ಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು ||2|| ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನು ಬಲ್ಪಂಥವಿಲ್ಲದವನ ಬಾಳ್ವೆಯೇನು ಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನ ಸ್ವಲ್ಪವೂ ನೆನೆಯದ ನರನಿದ್ದರೇನು ||3||

Thoughts & Reflections

0

No reflections shared yet. Be the first to share your thoughts!

Share your thought