Bhasaka
← Back to home

ಆರು ಹಿತವರು ಎಂದು ನಂಬಬೇಡ 

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ಝಂಪೆತಾಳ
ಆರು ಹಿತವರು ಎಂದು ನಂಬಬೇಡ ಆರಿಗಾರಿಲ್ಲ ಆಪತ್ತು ಬಂದೊದಗಿದಡೆ ಜನಕ ಹಿತದವನೆಂದು ನಂಬಬಹುದೇ ಹಿಂದೆ ತನಯ ಪ್ರಹ್ಲಾದನಿಗೆ ಪಿತ ಮುನಿದನು ಜನನಿ ರಕ್ಷಿಪಳೆಂಬೆನೇ ತಿಳಿತಿಳಿದು ಕುಂತಿ ತನಯ ರಾಧೇಯನಿಗೆ ಎರಡೆಣಿಸಿದ ಮೇಲೆ ||1|| ಮಗನು ತೆತ್ತಿಗನೆನಲೆ ಕಂಸ ತನ್ನಯ ಪಿತನ ನಿಗಳ ಬಂಧನದಿಂದ ಬಂಧಿಸಿದನು ಜಗವರಿಯೆ ಸೋದರನು ಮಮತೆಯುಳ್ಳವನೆನಲೆ ಹಗೆವೆರಸಿ ವಾಲಿಯನು ಅನುಜ ಕೊಲಿಸಿದ ಮೇಲೆ ||2|| ತನಗೆ ದೇಹಾನುಬಂಧಿಗಳೆ ಬಂಧುಗಳೆಂದು ಮನದಿ ನಿಚ್ಚಳವಾಗಿ ನಂಬಬೇಡ ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನ ಅನುದಿನದಿ ನಂಬಿದವಗಿಹಪರದಿ ಸುಖವು || 3||

Thoughts & Reflections

0

No reflections shared yet. Be the first to share your thoughts!

Share your thought