Bhasaka
← Back to home

ಆರೂ ಸಂಗಡ ಬಾಹೋರಿಲ್ಲ 

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ಆರೂ ಸಂಗಡ ಬಾಹೋರಿಲ್ಲ ನಾರಾಯಣ ನಾಮ ನೆರೆ ಬಾಹೋದಲ್ಲದೆ ಹೊತ್ತು ನವಮಾಸ ಪರಿಯಂತ ಗರ್ಭದಲಿ ಹೆತ್ತು ಅತ್ಯಂತ ನೋವು ಬೇನೆಗಳಿಂದಲಿ ತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆ ಹೊತ್ತುಗಳೆವರಲ್ಲದೆ ಬೆನ್ಹತ್ತಿ ಬಹರೆ ||1|| ಗುರು ಬಂಧು ಬುಧ ಜನರು ನಿಂತಗ್ನಿ ಸಾಕ್ಷ್ಯಾಗಿ ಕರವಿಡಿದು ಧಾರೆಯನೆರೆಸಿಕೊಂಡ ತರುಣಿ ಇನಿಯನ ಹರಣ ಹೋಗಲು ತಾ ಕಂಡು ಬರುವುದಕಂಜಿ ದಾರು ಗತಿಯೆಂದಳುವಳು ||2|| ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರು ಧನಕಾಗಿ ನಿನ್ನನೆ ನಂಬಿದವರು ಅನುಮಾನವೇಕೆ ಜೀವನು ತೊಲಗಿದಾಕ್ಷಣದಿ ಇನ್ನೊಂದು ಅರಗಳಿಗೆ ನಿಲ್ಲಗೊಡರು ||3|| ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲ ಹೊತ್ತು ಹೋದೀತು ಹೊರಗೆ ಹಾಕೆನುವರು ಹಿತ್ತಲಾ ಕಸಕಿಂತ ಅತ್ತತ್ತ ಈ ದೇಹ ಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು ||4|| ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿ ಪರಗತಿಗೆ ಸಾಧನವ ಮಾಡಿಕೊಳ್ಳೊ ಕರುಣನಿಧಿ ಕಾಗಿನೆಲೆಯಾದಿಕೇಶವರಾಯನ ನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ ||5|| (* ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.)

Thoughts & Reflections

0

No reflections shared yet. Be the first to share your thoughts!

Share your thought