Bhasaka
← Back to home

ಆವುದೊಳ್ಳೆಯದೊ ನಿನ್ನಂಗ

Author: ಕನಕದಾಸCategory: ಶ್ರೀನರಸಿಂಹRaaga: ಸಾವೇರೀTaala: ಆಟತಾಳ
ಆವುದೊಳ್ಳೆಯದೊ ನಿನ್ನಂಗ - ಚೆಲುವ ದೇವ ಬಂಕಾಪುರದ ಲಕುಮಿ ನರಸಿಂಗ ||ಪ|| ಜಗದೊಳಗೆ ತಾನು ತಂದೆಯ ಮಾತು ಕೇಳದಾ ಮಗನು ಇಹ ಪರಕೆ ಸಲುವ ಪ್ರಾಜ್ಞನೆ? ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ ||1|| ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹ ಒಡಹುಟ್ಟಿದವಗೆ ಕೈವಲ್ಯವುಂಟೆ? ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿ ಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ ||2|| ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗ ನೋಡಿದಾಗಲೆ ಪ್ರಾಯಶ್ಚಿತ್ತವುಂಟು ನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನ ಸೂಡಿದಾತನ ಸ್ನೇಹವನು ಮಾಢಿಕೊಂಡಿರ್ಪೆ ||3|| ದೇಶದೊಳು ವಂಶಕಂಟಕರೆನಿಸಿದವರೊಳಗೆ ಭಾಷಣವ ಮಾಡಬಪ್ಪುದೆ ಪ್ರಾಜ್ಞರು? ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ ||4|| ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ ಗಡೆಯಲ್ಲಿ ಮನೆಯ ಕಟ್ಟಿಸಬಾರದೇ ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯ ತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ ||5||

Thoughts & Reflections

0

No reflections shared yet. Be the first to share your thoughts!

Share your thought