Bhasaka
← Back to home

ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ

Author: ಕನಕದಾಸCategory: ಶ್ರೀಕೃಷ್ಣRaaga: ಶಂಕರಾಭರಣTaala: ಏಕತಾಳ
ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ ||ಪ|| ಮುಂದಕೆ ನಿಮ್ಮ ಮನೆಗೆ ಬಾರನಮ್ಮ ||ಅ|| ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆ ಬಿಗಿಯಬಹುದೇ ಶ್ರೀ ಚರಣವನು ಅಗಣಿತ ಮಹಿಮನ ಅಂಜಿಸಲೇಕಮ್ಮ ಬಗೆಯಬಾರದೆ ನಿಮ್ಮ ಮಕ್ಕಳಂತೆ ||1|| ಹಸುಮಗುವನು ಕಂಡು ಮುದ್ದಿಸಲೊಲ್ಲದೆ ಹುಸಿಗ ಕಳ್ಳನೆಂದು ಕಟ್ಟುವಿರಿ ವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ ನಿಮ್ಮ ಹಸುಮಗುವಿನಂತೆ ಭಾವಿಸಬಾರದೆ ||2|| ಎಷ್ಟು ಸಾರಿಯು ನಾ ಬೇಡವೆಂದರೆ ಕೇಳ ದುಷ್ಟ ಮಕ್ಕಳ ಕೂಡೆ ಒಡನಾಟವ ಕಟ್ಟಿದ ನೆಲುವಿನ ಬೆಣ್ಣೆಯನೀವೆನು ಬಿಟ್ಟು ಕಳುಹಿರಮ್ಮ ಆದಿಕೇಶವನ ||3||

Thoughts & Reflections

0

No reflections shared yet. Be the first to share your thoughts!

Share your thought