Bhasaka
← Back to home

ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ

Author: ಕನಕದಾಸCategory: ವೈರಾಗ್ಯRaaga: ಕಾಂಬೋಧಿTaala: ಝಂಪೆತಾಳ
ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ ||ಪ|| ವಾಸುದೇವನ ಭಜಿಸೊ ಒರಟು ಜೀವನವೆ ||ಅ|| ನೆಂಟರೂರಿಗೆ ಹೋಗಿ ನಾಲ್ಕು ದಿವಸವಿದ್ದರೆ ಎಂಟು ದಿನದಾಯಾಸ ಅಟ್ಟಬಹುದೊ ಉಂಟು ಸೌಭಾಗ್ಯವೆಂಬ ಧೈರ್ಯವ ಬಿಟ್ಟು ವೈ ಕುಂಠವಾಸಿಯ ಭಜಿಸೊ ತುಂಟ ಜೀವನವೆ ||1|| ಮಡದಿ ಮಕ್ಕಳು ಎಂಬ ಮಾಯಾ ಸಂಸಾರಕ್ಕೆ ಸಡಗರವಗೊಂಡು ಬರಿದೆ ಭ್ರಮಿಸಲೇಕೆ ಬಿಡದೆ ಯಮನಾಳುಗಳು ಬಾರೆಂದು ಎಳೆವಾಗ ಮಡದಿ ಮಕ್ಕಳು ಬಹರೆ ಭಂಡ ಜೀವನವೆ ||2|| ಇಷ್ಟ ಸಂಪತ್ತನ್ನು ಬಡವರಾ ಕರೆತಂದು ಕೊಟ್ಟು ಮಾಡಿದ ಪುಣ್ಯಫಲ ತನ್ನದೊ ಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿ ಮುಟ್ಟಿ ಮನದಲಿ ಭಜಿಸೊ ಭ್ರಷ್ಟಜೀವನವೆ ||3||

Thoughts & Reflections

0

No reflections shared yet. Be the first to share your thoughts!

Share your thought