Bhasaka
← Back to home

ಈತನೀಗ ವಾಸುದೇವನು

Author: ಕನಕದಾಸCategory: ಶ್ರೀಕೃಷ್ಣRaaga: ಭೈರವೀTaala: ರೂಪಕತಾಳ
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ||ಪ|| ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ||ಅ|| ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರ ನನುಜೆಯಾಳಿದವನ ಶಿರವ ಕತ್ತರಿಸುತ- ತನ್ನ ಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮ ನನುಜೆಯಾಳಿದವನ ಮೂರ್ತಿಯನ್ನು ನೋಡಿರೊ ||1|| ನರನಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿ ಶರಗಳನ್ನು ತೀಡುತಿಪ್ಪನ ಯೋಚಿಸಿ ಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನ ಶಿರವನ್ನು ಛೇದಿಸಿದ ದೇವ ಕಾಣಿರೊ ||2|| ಸೃಷ್ಟಿಕರ್ತಗೆ ಮಗನಾದವನಿಗಿಷ್ಟ ಭೂಷಣ ಅಶನವಾದನ ಜ್ಯೇಷ್ಠ ಪುತ್ರಗೆ ವೈರಿ ತೊಡೆಯ ಛೇದಿಸೆಂದು ಬೋಧಿಸಿ ಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ ತ್ಕೃಷ್ಟ ಮಹಿಮನಾದ ದೇವ ಕಾಣಿರೊ ||3|| ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗ ವೀರನರನತ್ತ ಬಪ್ಪುದನ್ನು ಈಕ್ಷಿಸಿ ಪೌರಾಣಿಕ ವಾವೆ ವರಸೆಯ ಮುಂಡಿಗೆಗಳು ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದ ಭಾರಕರ್ತನಾದ ದೇವನೀತ ಕಾಣಿರೊ ||4|| ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತ ಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿ ಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ ಭೌಮ ಬಾಡದಾದಿಕೇಶವನ್ನ ನೋಡಿರೊ ||5||

Thoughts & Reflections

0

No reflections shared yet. Be the first to share your thoughts!

Share your thought