Bhasaka
← Back to home

ಎಂಥ ಕೀರುತಿ ಪೊತ್ತುವೆರಡು ಪಾದ

Author: ಕನಕದಾಸCategory: ಶ್ರೀಕೃಷ್ಣRaaga: ಶಂಕರಾಭರಣTaala: ಆಟತಾಳ
ಎಂಥ ಕೀರುತಿ ಪೊತ್ತುವೆರಡು ಪಾದ- ಶ್ರೀ ಕಾಂತ ಬಾಡದ ರಂಗ ಕರುಣಿ ದೇವೋತ್ತುಂಗ ||ಪ|| ಕುಬ್ಜ ಬ್ರಾಹ್ಮಣನಾಗಿ ಕುಂಭಿನಿ ಈರಡಿ ಮಾಡಿ ಹೆಜ್ಜೆಯೊಳಡಗಿಟ್ಟ ಹೆಚ್ಚಿನ ಪಾದ ಅರ್ಜುನನ ಶಿರವ ಕಾಯಲು ಬಾಣದಿಂದ ರಥವ ಗುಜ್ಜೆಯಲೂರಿ ನೆಲಕೊತ್ತಿದ ಪಾದ ||1|| ಶಾಪದಿ ಬಹುಕಾಲ ಅಹಲ್ಯೆಯು ಶಿಲೆಯಾಗೆ ಆ ಪ್ರಾಣ ನಿರ್ಮಿಸಿದ ಅಧಿಕ ಪಾದ ಗೋಪಿ ಕಟ್ಟಿದ ಒರಳ ಗೊಲ್ಲಗೇರಿಗೆಳೆಯುತ ಆ ಫಣಿಯ ತಲೆಯ ಮೇಲಾಡಿದ ಪಾದ ||2|| ಕುರುರಾಯನೇಳದೆಯೆ ಕುಳಿತ ಸಿಂಹಾಸನದಿ ಉರುಳಿಸಿಬಿಟ್ಟಂತ ಉನ್ನತ ಪಾದ ಮರಕತ ನಗರಿಯ ಬಾಡ ಬಂಕಾಪು ದರಸು ಸಿರಿಯಾದಿಕೇಶವನ ಶ್ರೀಪಾದ ||3||

Thoughts & Reflections

0

No reflections shared yet. Be the first to share your thoughts!

Share your thought