Bhasaka
← Back to home

ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ 

Author: ಕನಕದಾಸCategory: ಇತರೆRaaga: ಶಂಕರಾಭರಣTaala: ಏಕತಾಳ
ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ ||ಪ|| ಅಂಗಡಿ ಬೀದಿಯೊಳೊಂದು ಆಕಳ ಕರು ನುಂಗಿತು ಲಂಘಿಸುವ ಹುಲಿಯ ಕಂಡು ನರಿಯು ನುಂಗಿತು ||1|| ಹುತ್ತದೊಳಾಡುವ ಸರ್ಪ ಮತ್ತ ಗಜವ ನುಂಗಿತು ಉತ್ತರದಿಶೆಯೊಳು ಬೆಳುದಿಂಗಳಾಯಿತಮ್ಮ ||2|| ಯೋಗ ಮಾರ್ಗಿ ಕಾಗಿನೆಲೆಯಾದಿಕೇಶವರಾಯ ಭಾಗವತರ ಬೆಡಗಿದು ಬೆಳುದಿಂಗಳಾಯಿತಮ್ಮ ||3||

Thoughts & Reflections

0

No reflections shared yet. Be the first to share your thoughts!

Share your thought