Bhasaka
← Back to home

ಎನ್ನ ನುಡಿ ಪುಸಿಯಲ್ಲ ಈ ಜಗದೊಳು 

Author: ಕನಕದಾಸCategory: ಇತರೆRaaga: ಕಾಂಬೋಧಿTaala: ಝಂಪೆತಾಳ
ಎನ್ನ ನುಡಿ ಪುಸಿಯಲ್ಲ ಈ ಜಗದೊಳು ||ಪ|| ಅರವಿಂದವಿಲ್ಲದಿಹ ಕೊಳವು ತಾ ಕಂಗಳವು ಹರಿಣಾಂಕನಿಲ್ಲದಿಹ ಇರುಳು ಮರುಳು ಸ್ವರಭೇದವಿಲ್ಲದಿಹ ಸಂಗೀತವಿಂಗೀತ ಸರಸವಿಲ್ಲದ ಸತಿಯ ಭೋಗ ತನುರೋಗ ||1|| ಪಂಥ ಪಾಡುಗಳನರಿಯದ ಬಂಟನವ ತುಂಟ ಅಂತರವರಿಯದಾ ವೇಶಿ ಹೇಸಿ ದಂತಿಯಿಲ್ಲದ ಅರಸು ಮುರಿದ ಕಾಲಿನ ಹೊರಸು ಅಂತಸ್ಥವಿಲ್ಲದ ಪ್ರಧಾನಿ ಮದ್ಯಪಾನಿ ||2|| ಮಾಗಿಯಲಿ ಸತಿಯನಗಲಿದ ಕಾಂತನವ ಭ್ರಾಂತ ಪೂಗಣೆಯ ಗೆಲಿಯದಿಹ ನರ ಗೋಖುರ ಭೋಗಿಸದೆ ಇಹಪರಕೆ ಗಳಿಸಿದರ್ಥ ಅಪಾರ್ಥ ಕಾಗಿನೆಲೆಯಾದಿಕೇಶವನ ಭಕ್ತ ಮುಕ್ತ ||3||

Thoughts & Reflections

0

No reflections shared yet. Be the first to share your thoughts!

Share your thought