Bhasaka
← Back to home

ಎಲ್ಲಿಂದ ಬಂದೆ ಮುಂದೆತ್ತ ಪಯಣ

Author: ಕನಕದಾಸCategory: ವೈರಾಗ್ಯRaaga: ಕಾಂಬೋಧಿTaala: ಝಂಪೆತಾಳ
ಎಲ್ಲಿಂದ ಬಂದೆ ಮುಂದೆತ್ತ ಪಯಣ ಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ ||ಪ|| ಮಾತೆಯುದರದೊಳು ನವಮಾಸ ಮಲ ಮೂತ್ರದೊಳು ಯಾತನೆಯ ಯೋನಿ ಮುಖ ಮಾರ್ಗವಿಡಿದು ಭೂತಳಕೆ ಬಂದ ಹದನೇನ ತೀರಿಸಿಕೊಂಡೆ ಜಾತಿ ಯಾವುದು ನಿನ್ನ ಹೆಸರೇನು ಮರುಳೆ ||1|| ಮುಂದಾವ ಪಥವ ಸೇರುವೆ ಮರುಳೆ, ಸಾಕಿನ್ನು ಹಿಂದೆ ನೆರವಾಗಿ ನಿಂತಾಪ್ತರುಂಟೆ ಒಂದುಗೂಡಿದ ಪತ್ನಿ ಸುತರೆಲ್ಲ ವರ್ಜಿಪರು ನಿಂದು ಮಾತಾಡು ಬರಿದೆ ಬಳಲಿದೆ ಮರುಳೆ ||2|| ಬರವಿದೇತಕೆ ನಿನ್ನ ಸ್ಥಳವೆಲ್ಲಿ ನೆಲೆಗೊಂಡು ಇರುವ ಮಂದಿರವಾವುದದನೆನಗೆ ಪೇಳೊ ಧರೆಯೊಳಗೆ ವರಕಾಗಿನೆಲೆಯಾದಿಕೇಶವನ ಸಿರಿ ಚರಣಕಮಲವನು ನೆರೆನಂಬಿ ಸುಖಸೊ ||3||

Thoughts & Reflections

0

No reflections shared yet. Be the first to share your thoughts!

Share your thought