Bhasaka
← Back to home

ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ 

Author: ಕನಕದಾಸCategory: ವೈರಾಗ್ಯRaaga: ಗೌಳಿಪಂತುTaala: ತ್ರಿಪುಟತಾಳ
ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ ||ಪ|| ಕಳ್ಳರಿಗೆ ಕಳ್ಳನಂತೆ- ಬೆಳ್ಳಕ್ಕಿಯಂದದಿ ಡಂಭ ||ಅ|| ಗಾಣದೆತ್ತಿನಂತೆ ಕಣ್ಣ ಮುಚ್ಚಿ ಪ್ರದಕ್ಷಿಣೆಯ ಮಾಡಿ ಕಾಣದೆ ತಿರುಗುವೆನೆರಡು ಕಣ್ಣಿದ್ದು ನಾನು ಮಾಣಿಕ್ಯದ ರಾಶಿಯಲ್ಲಿ ಅಂಧಕರೈವರು ಕೂಡಿ ಆಣಿಮುತ್ತ ಹಿಡಿದು ಹಿಡಿದು ಬಿಡುವ ಭ್ರಮಿತನಯ್ಯ ||1|| ಗುಂಡು ಮುಳುಗನ ಹಕ್ಕಿಯಂತೆ ಕಂಡ ಕಂಡ ನೀರ ಮುಳುಗಿ ಮಂಡೆ ಶೂಲೆ ಬಾಹೋದಲ್ಲದೆ ಗತಿಯ ಕಾಣೆನೊ ಮಂಡೂಕನಂದದಲಿ ನೀರ ತಡಿಯಲಿ ಕುಳಿತುಕೊಂಡು ಮುಂಡೆ ಮುಸುಕನಿಕ್ಕಿ ಮೂಗು ಹಿಡಿದು ಬಿಡುವ ಭ್ರಮಿತನಯ್ಯ||2|| ಇಕ್ಕುಳದ ಕೈಯಲ್ಲಿ ಹಿಡಿದ ಕಾದ ಕಬ್ಬಿಣದಂತೆ ಸಿಕ್ಕಿ ಸಿಡಿಮಿಡಿಗೊಂಬೆ ಗತಿಯ ಕಾಣದೆ ಹೊಕ್ಕುಳ ಹೂವಿನ ಬಾಡಾದಾದಿಕೇಶವನ ಮೊರೆ ಹೊಕ್ಕೆನಿಂದು ಮನ್ನಿಸಿ ಕಾಯೊ ದೇವದೇವೋತ್ತಮನೆ ||3||

Thoughts & Reflections

0

No reflections shared yet. Be the first to share your thoughts!

Share your thought