Bhasaka
← Back to home

ಏನು ಇಲ್ಲದ ಎರಡು ದಿನದ ಸಂಸಾರ

Author: ಕನಕದಾಸCategory: ಇತರೆRaaga: ಮುಖಾರಿTaala: ಝಂಪೆತಾಳ
ಏನು ಇಲ್ಲದ ಎರಡು ದಿನದ ಸಂಸಾರ ಜ್ಞಾನದಲಿ ದಾನಧರ್ಮವ ಮಾಡಿರಯ್ಯ ||ಪ|| ಹಸಿದು ಬಂದವರಿಗೆ ಅಶನವೀಯಲು ಬೇಕು ಶಿಶುವಿಗೆ ಪಾಲ್ಬೆಣ್ಣೆಯನುಣಿಸಬೇಕು ಹಸನಾದ ಭೂಮಿಯನು ದಾರೆಯೆರೆಯಲು ಬೇಕು ಪುಸಿಯಾಡದಲೆ ಭಾಷೆ ನಡೆಸಲೇ ಬೇಕು ||1|| ಕಳ್ಳತನಗಳ ಮಾಡಿ ಒಡಲ ಹೊರೆಯಲು ಬೇಡ ಕುಳ್ಳಿರ್ದ ಸಭೆಯೊಳಗೆ ಕುತ್ಸಿತವು ಬೇಡ ಒಳ್ಳೆಯವ ನಾನೆಂದು ಬಲು ಹೆಮ್ಮೆ ಪಡಬೇಡ ಬಾಳ್ವೆ ಸ್ಥಿರವೆಂದು ನೀ ನಂಬಿ ಕೆಡಬೇಡ ||2|| ದೊರೆತನವು ಬಂದಾಗ ಕೆಟ್ಟುದ ನುಡಿಯಬೇಡ ಸಿರಿ ಬಂದ ಕಾಲಕ್ಕೆ ಬಲು ಮೆರೆಯಬೇಡ ಸಿರಿವಂತ ಶ್ರೀ ಕಾಗಿನೆಲೆಯಾದಿಕೇಶವನ ಚರಣ ಕಮಲವ ಸೇರಿ ಸುಖಿಯಾಗು ಮನುಜ ||3||

Thoughts & Reflections

0

No reflections shared yet. Be the first to share your thoughts!

Share your thought