Bhasaka
← Back to home

ಏನು ಬರುವುದೊ ಸಂಗಡೇನು ಬರುವುದೊ 

Author: ಕನಕದಾಸCategory: ವೈರಾಗ್ಯRaaga: ಧನ್ಯಾಸಿTaala: ಆದಿತಾಳ
ಏನು ಬರುವುದೊ ಸಂಗಡೇನು ಬರುವುದೊ ||ಪ|| ದಾನ ಧರ್ಮ ಮಾಡಿ ಬಹು ನಿಧಾನಿ ಎನಿಸಿಕೊಳ್ಳೊ ಮನುಜ ||ಅ|| ಹೆಂಡರಿಲ್ಲ ಮಕ್ಕಳಿಲ್ಲ ಮಂಡೆ ತುಂಬ ಬಂಧುಬಳಗ ಕಂಡು ಬಿಡಿಸಿಕೊಂಬರಾರೊ ದುಂಡ ಯಮನ ದೂತರೆಳೆಯೆ ಬಂಡಿ ತುಂಬ ಇದ್ದ ಧನವು ಹಿಂದೆ ಉಳಿವುದಲ್ಲೊ ನಿನ್ನ ಅಂಡಿಕೊಂಡು ಬರುವ ವಸ್ತು ಕೀರ್ತಿ ಅಪಕೀರ್ತಿ ಎರಡೆ ||1|| ಎನ್ನದೆಂದು ತನ್ನದೆಂದು ಹೊನ್ನು ಹೆಣ್ಣು ಮಣ್ಣಿಗಾಗಿ ಬನ್ನಪಟ್ಟು ಬಾಯಿಬಿಡುವೆ ಬರಿದೆ ಮೋಹದಿ ಚೆನ್ನ ಮನದಿ ಪರಹಿತಾರ್ಥ ಮಾಡಿ ಪುಣ್ಯಪಡೆಯೊ ನೀನು ಇನ್ನು ಮುಂದೆ ಕಿತ್ತು ತಿಂಬ ಕೂಪದಲ್ಲಿ ಕೆಡಲು ಬೇಡ ಮನುಜ ||2|| ಬತ್ತಲಿಂದ ಬರುತ್ತಿಹರು ಬತ್ತಲಿಂದ ಹೋಗುತಿಹರು ಕತ್ತಲೆ ಕಾಲವನು ಬೆಳಕು ಮಾಡಿ ಹೊತ್ತುಗಳೆವರು ಸತ್ತರಿಲ್ಲ ಅತ್ತರಿಲ್ಲ ಹೊತ್ತುಕೊಂಡು ಹೋಹರಿಲ್ಲಿ ಮತ್ತೆ ದೇಹ ಮಣ್ಣುಗೂಡಿದಂತೆ ಕೆಡಲು ಬೇಡ ಮನುಜ ||3|| ಕಟ್ಟಲಿಲ್ಲ ಬಿಚ್ಚಲಿಲ್ಲ ಕಷ್ಟಪಟ್ಟು ಬಳಲಲಿಲ್ಲ ಸುಟ್ಟು ಸುಟ್ಟು ಸುಣ್ಣದ್ಹರಳು ಆಯಿತಲ್ಲೊ ಕಾಯ ಬಿಟ್ಟು ಹೋಗುವಾಗ ಬೊಟ್ಟು ಬಟ್ಟೆ ನಿನಗೆ ಹೊಂದಲಿಲ್ಲ ಕಟ್ಟ ಕಡೆಗೆ ದೃಷ್ಟಿ ನೋಟ ಬಟ್ಟ ಬಯಲು ಆಗುತಿಹುದು ||4|| ಗರುವದೋರಿ ನಿಂದ ನೀನು ಬರಿದೆ ಕಾಲ ಕಳೆದೆ - ಮುಂ ದರಿದು ನೋಡು ನರರ ತನುವು ದೊರಕಲರಿಯದು ನೆರೆ ಮಹಾಮೂರ್ತಿ ಒಡೆಯ ಬಾಡದಾದಿಕೇಶವನಲ್ಲಿಟ್ಟು ಭಕುತಿ ಚರಣ ಭಜಿಸಿ ಚಂಚಲಳಿಸಿ ವರವ ಪಡೆದು ಹೊಂದು ಮುಕುತಿ ||5||

Thoughts & Reflections

0

No reflections shared yet. Be the first to share your thoughts!

Share your thought