Bhasaka
← Back to home

ಏನು ಮಾಡಲಯ್ಯ

Author: ಕನಕದಾಸCategory: ವೈರಾಗ್ಯRaaga: ಮುಖಾರಿTaala: ಝಂಪೆತಾಳ
ಏನು ಮಾಡಲಯ್ಯ ಬಯಲಾಸೆ ಬಿಡದು ||ಪ|| ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ||ಅ|| ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನು ಕಾತರಿಸಿ ಬೀಳುವ ಪತಂಗದಂದದಲಿ ಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವ ಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ ||1|| ಅಂದವಹ ಸಂಪಗೆಯ ಅರಳ ಪರಿಮಳವುಂಡು ಮುಂದುವರಿಯದೆ ಬೀಳ್ವ ಮಧುಪನಂತೆ ಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂ ಗಂಧ ವಾಸಿಸುವ ಘ್ರಾಣೇಂದ್ರಿಯಕೆ ||2|| ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡು ಪ್ರಾಣಾಹುತಿಯೆಂದು ಸವಿವ ಮೀನಿನಂತೆ ಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದು ಜಾಣತನದಲಿ ನಲಿವ ಜಿಹ್ವೇಂದ್ರಿಯಕೆ ||3|| ದಿಮ್ಮಿ ದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆ ಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆ ರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ ||4|| ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿ ಕಕ್ಕುಲಿತೆಗೊಂಬುದಿದ ನೀನು ಬಿಡಿಸೊ ಸಿಕ್ಕಸದಿರು ಸಿಕ್ಕಿಗೆ ಆದಿಕೇಶವರಾಯ ದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ ||5||

Thoughts & Reflections

0

No reflections shared yet. Be the first to share your thoughts!

Share your thought