Bhasaka
← Back to home

ಏನೆ ಮನವಿತ್ತೆ ಲಲಿತಾಂಗಿ

Author: ಕನಕದಾಸCategory: ಶ್ರೀಕೃಷ್ಣRaaga: ಯದುಕುಲ ಕಾಂಬೋದಿTaala: ತ್ರಿಪುಡೆ
ಏನೆ ಮನವಿತ್ತೆ ಲಲಿತಾಂಗಿ ಅಸ ಮಾನ ಗೋವಳ ಕುಲವಿಲ್ಲದವನೊಳು ||ಪ|| ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ ||1|| ಮಗಳ ಮಗಗೆ ಮೈದುನನಾಗಿ ಮಾವನ ಜಗವರಿಯಲು ಕೊಂದ ಕುಲಗೇಡಿ ಗೋವಳ ||2|| ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದ ಚಿತ್ತ ಒಲಿದು ಚೆನ್ನ ಆದಿಕೇಶವನೊಳು ||3||

Thoughts & Reflections

0

No reflections shared yet. Be the first to share your thoughts!

Share your thought