Bhasaka
← Back to home

ಏನೆಂದಳೇನೆಂದಳೋ  ನಿನ್ನೊಳು ಸೀತೆ

Author: ಕನಕದಾಸCategory: ಶ್ರೀಕೃಷ್ಣ
ಏನೆಂದಳೇನೆಂದಳೋ ನಿನ್ನೊಳು ಸೀತೆ ಹನುಮಯ್ಯ ಜನಕನರಮನೆಯಲ್ಲಿ ಜನಿಸಿ ಸುಖದಲ್ಲಿರಲುಧನು ಮುರಿದು ಕೈಹಿಡಿದು ತನ್ನಘನ ಪದವಿಯನು ಬಿಟ್ಟು ವನವ ಸೇರಿದನೆಂದುವನಿತೆ ತಪಿಸುತೆ ಮನದಿ ನೊಂದು|| 1|| ಕುರುಹಿನುಂಗುರವನು ತರಳಾಕ್ಷಿಗಿತ್ತಾಗತಿರುಳಿಗಿಂತಧಿಕವೇ ಕರಟವೆಂದುಬೆರಳಿಂದ ಚಿಮ್ಮಿದಳೆ ಅಶೋಕವನದಾಚೆಗೆನಿರುತ ಸಂತಾಪದಲಿ ಮನದಿ ನೊಂದು ||2|| ಸೇತುವೆಯ ಕಟ್ಟಿ ಸಿಂಧುಗೆ ವಿಭೀಷಣಾಗ್ರಜಾತ ಲಂಕಾಧಿಪನ ವಧಿಸಿಸೀತೆಯನು ಸೆರೆಯಿಂದ ಬಿಡಿಸಿದ್ದೆ ಆದರೆನಾಥಾದಿಕೇಶವಗೆ ಬಲು ಬಿರುದು ಎಂದು||3||

Thoughts & Reflections

0

No reflections shared yet. Be the first to share your thoughts!

Share your thought