Bhasaka
← Back to home

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ 

Author: ಕನಕದಾಸCategory: ಶ್ರೀಕೃಷ್ಣRaaga: ಸೌರಾಷ್ಟ್ರTaala: ಆಟತಾಳ
ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ ||ಪ|| ತುಂಬಿ ನಾಳತುದಿ ತುಂಬಿ ಭಾನು ಪ್ರಭೆ ಚಂದಮಾಮ ||ಅ|| ಕದರು ಗಾತರ ಕಂಬ ತೆಕ್ಕೆಗಾತರ ಹೂವು ಚಂದಮಾಮ ಆನೆ ಗಾತರ ಕಾಯಿ ಒಂಟೆ ಗಾತರ ಹಣ್ಣು ಚಂದಮಾಮ ||1|| ಕಾಲಿಲ್ಲದಾತನು ಹತ್ತಿದನಾ ಮರವನು ಚಂದಮಾಮ ಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ ||2|| ನೆತ್ತಿಲ್ಲದಾತನು ಹೊತ್ತನಾ ಹಣ್ಣ ಚಂದಮಾಮ ತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ ||3|| ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮ ಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ ||4|| ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮ ಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ ||5|| ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ ||6|| ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮ ಸುಲಭ ಪದವಿದು ನಳಿನಜಾಂಡದೊಳು ಚಂದಮಾಮ ||7|| ಗುರುವಿನ ಮಹಿಮೆ ಗುರುವೆ ತಾ ಬಲ್ಲನು ಚಂದಮಾಮ ಮೂಢನಾದವನೇನು ಬಲ್ಲನು ಈ ಮಾತ ಚಂದಮಾಮ ||8|| ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮ ತಿಳಿದವರು ಪೇಳಿರೀ ಹಳೆಗನ್ನಡವ ಚಂದಮಾಮ ||9||

Thoughts & Reflections

0

No reflections shared yet. Be the first to share your thoughts!

Share your thought