Bhasaka
← Back to home

ಒಡವೆ ಹೋಯಿತು ಮನ ದೃಢವಾಯಿತು

Author: ಕನಕದಾಸCategory: ವೈರಾಗ್ಯRaaga: ಪಂತುವರಾಳಿTaala: ಆಟತಾಳ
ಒಡವೆ ಹೋಯಿತು ಮನ ದೃಢವಾಯಿತು ||ಪ|| ಹಿಡಿದರೋಡುವ ಕಳ್ಳ ಬಿಡದೆ ಕದ್ದುಕೊಂಡು ಹೋದ ||ಅ|| ಆರು ಜೋಡಿನ ಓಲೆಯಿತ್ತು ಮೂರು ಮುತ್ತಿನ ಮೂಗುತಿಯಿತ್ತು ಚಾತುತರದ ಇಪ್ಪತ್ನಾಲ್ಕೆಳೆಯ ಸರವು ಒಂದಿತ್ತು ಈರೈದು ತಾಳಿಗಳಿತ್ತು ಬಿರುದಿನ ಕಪ್ಪೆಂಟಿತ್ತು ದಾರಿ ನೋಡಿಕೊಂಡು ಇದ್ದ ಛಾಯನೆಂಬ ಕಳ್ಳ ಕದ್ದ ||1|| ಎಪ್ಪತ್ತೆರಡು ಸಾವಿರ ಸೂತ್ರದ ಹಸ್ತಕಟ್ಟು ಎರಡಿತ್ತು ಕಪ್ಪು ಬಿಳುಪು ಕೆಂಪು ವರ್ಣದ ಪದಕ ಒಂದಿತ್ತು ಒಪ್ಪವಿತ್ತ ಹಸ್ತಕಡಗ ಆಶಾಪಾಶವೆರಡಿತ್ತು ಒಪ್ಪವನ್ನು ಸಾಧಿಸಿ ನೇತ್ರನೆಂಬ ಕಳ್ಳ ಕದ್ದ ||2|| ಹುಟ್ಟು ಸಾವು ಎರಡು ಎಂಬ ಘಟ್ಟಿ ತೂಕದ ನಗವಿತ್ತು ಕಷ್ಟ ಸುಖ ಕರ್ಮಗಳೆಂಬ ಸಂಚಿಗಳಿತ್ತು ಅಷ್ಟು ಇಷ್ಟು ಚಿಲ್ಲರೆ ಒಡವೆ ಪೆಟ್ಟಿಗೆಯಲಿ ತುಂಬಿತ್ತು ದೃಷ್ಟಿ ನೋಡಿಕೊಂಡು ಇದ್ದ ಧರ್ಮನೆಂಬ ಕಳ್ಳ ಕದ್ದ ||3|| ಎಲ್ಲ ಒಡವೆ ಹೋಯಿತಾದರು ಪುಲ್ಲಳಾಗಿ ಮೆರೆಯುತಾಳೆ ಚೆಲ್ವನೊಬ್ಬ ಪುರುಷನ ಕಂಡು ತಾಳಲಾರದೆ ಬಲ್ಲಿದಳು ಈಕೆ ಎಂದು ಇವಳ ಬಗೆ ತಿಳಿಯಿತೆಂದು ಕೊಲ್ಲಬಾರದೆನುತ ಹೇಳಿ ಮನೆಯ ಬಿಟ್ಟು ಹೊರಗಟ್ಟಿದ ||4|| ಇಂಥ ಒಡವೆ ಹೋಯಿತೆಂದು ಚೋದ್ಯಪಟ್ಟು ನೋಡುತಿರಲು ತಂತ್ರ ಮಾಡಿ ಆದಿಕೇಶವ ಶ್ರೀಹರಿಯು ತಾನೆ ಬಂದು ತಂತ್ರವನ್ನು ಹೇಳಿ ಜ್ಞಾನ ಮಾರ್ಗವನ್ನು ಬಿಟ್ಟುಕೊಟ್ಟು ಸಂತಸದಿಂದ ಇರು ಎಂದು ಚಿಂತೆ ಬಿಡಿಸಿ ಸಲೆ ಸಲಹಿದ ||5||

Thoughts & Reflections

0

No reflections shared yet. Be the first to share your thoughts!

Share your thought