Bhasaka
← Back to home

ಓಹೊ ಎನ ಜೀವ ಮೈಯೆಲ್ಲ ನವಗಾಯ 

Author: ಕನಕದಾಸCategory: ವೈರಾಗ್ಯRaaga: ಕಾಂಬೋಧಿTaala: ಝಂಪೆತಾಳ
ಓಹೊ ಎನ ಜೀವ ಮೈಯೆಲ್ಲ ನವಗಾಯ ||ಪ|| ಗಾಯ ಕಟ್ಟುವರಿಲ್ಲ ಗಾಳಿ ಹಾಕುವರಿಲ್ಲ ||ಅ|| ಮಾಡಿಲ್ಲ ಮಳೆಯಿಲ್ಲ ಮರದ ಮ್ಯಾಲೆ ನೀರ ಕಂಡೆ ಕಾಡು ಸುಡುವುದ ಕಂಡೆ ಬೂದಿಯ ಕಾಣಲಿಲ್ಲ ||1|| ಬಿತ್ತಲಿಲ್ಲ ಬೆಳೆಯಲಿಲ್ಲ ನೆಟ್ಟು ನೀರ ತೋರಲಿಲ್ಲ ಹೊತ್ತುಕೊಂಡು ತಿರುಗಿದೆ ರೊಕ್ಕದಾ ಪ್ರಾಣಿಯನ್ನು ||2|| ಅಡಿಕೆಯಷ್ಟು ಆಕಳಣ್ಣ ಹಿಡಿಕೆಯಷ್ಟು ಕೆಚ್ಚಲಣ್ಣ ಒಡನೆ ಕರೆದಾರ ಕರಿತೈತಿ ರಂಜಣಿಗಿ ಹಾಲಣ್ಣ ||3|| ಮೂರು ಮೊಳದಾ ಬಳ್ಳಿಗೆ ಆರು ಮೊಳದ ಕಾಯಣ್ಣ ಆರು ಹತ್ತರ ಮೊಳದ, ಕಾಯಿ ಕೊಯ್ಯುವ ಕುಡುಗೋಲಣ್ಣ ||4|| ಊರ ಮುಂದೆ ಹಿರಣ್ಯಕನ ಕೊರಳ ಕೊಯ್ವುದ ಕಂಡೆ ಕೊರಳ ಕೊಯ್ವುದ ಕಂಡೆ ರಕುತವ ಕಾಣಲಿಲ್ಲ ||5|| ಕಾಗಿನೆಲೆಯ ಕನಕದಾಸ ಹೇಳಿದಂಥ ಮುಂಡಿಗೆಯ ಮಿಗೆ ಒಳ ಹೊರಗೆಲ್ಲ ಬಲ್ಲ ಬಾಡದಾದಿ ಕೇಶವರಾಯ ||6||

Thoughts & Reflections

0

No reflections shared yet. Be the first to share your thoughts!

Share your thought