Bhasaka
← Back to home

ಕಡಹಾಯಿಸೊ ಕಮಲಲೋಚನನೆ ಎನ್ನ

Author: ಕನಕದಾಸCategory: ಶ್ರೀಕೃಷ್ಣRaaga: ನಾದನಾಮಕ್ರಿಯೆTaala: ಆಟತಾಳ
ಕಡಹಾಯಿಸೊ ಕಮಲಲೋಚನನೆ ಎನ್ನ ತಡಿಯ ಸೇರಿಸೊ ತರಣಿಶತಕೋಟಿ ತೇಜ ||ಪ|| ಕಾಕು ಇಂದ್ರಿಯಗಳೆಂಬ ಕಟುಕರಿಗೆ ನಾ ಸಿಲುಕಿ ಮೇಕೆಯಂದದಿ ಬಾಯಿ ಬಿಡುತಿಪ್ಪೆನು ಸಾಕಾರ ರೂಪ ಸರ್ವೋತ್ತಮನೆ ನೀ ಕರು- ಣಾಕರನೆಂಬ ಪೆಂಪುಂಟಾದಡೀಗೆನ್ನ ||1|| ಹಲವು ಜನ್ಮದ ಪಾಪವೆನಿಪ ಸೊಕ್ಕಾನೆ ಸೊಂ ಡಿಲು ಸುತ್ತಿ ಬಂದು ಸೀವರಿಸುತಿದೆಕೊ ಮಲೆವ ದುಷ್ಕೃತವೆಂಬ ಗಜಕೆ ಕೇಸರಿ ಎಂಬ ಛಲ ಬಿರುದು ತಾಳ್ದ ದೇವರ ದೇವ ನೀನೆನ್ನ ||2|| ಹಾದಿಗಾಣದೆ ತೊಲಗಿ ಪೋಪೆನೆಂದರೆ ಭಾವ ಬೂದಿಯೊಳಗಾಡಿ ಮುಳುಗಾಡುತಿಹೆನೊ ಭೂಧರನ ತಾಳ್ದ ಕೂರ್ಮಾವತಾರನೆ ಬಾಡ ದಾದಿಕೇಶವರಾಯ ಬೆನ್ನಲೆತ್ತಿಕೊಂಡು ||3||

Thoughts & Reflections

0

No reflections shared yet. Be the first to share your thoughts!

Share your thought