Bhasaka
← Back to home

ಕದರ ಮಂಡಲಗಿಯ ಕರುಣಿ ಹನುಮರಾಯ

Author: ಕನಕದಾಸCategory: ಶ್ರೀಹನುಮಂತ
ಕದರ ಮಂಡಲಗಿಯ ಕರುಣಿ ಹನುಮರಾಯ |ಸದುಗುಣವಂತನೆ ಹಣುವಂತನೆ ಅಂಜನೆಯ ವರಸೂನು ಆಶ್ರಿತ ಕಾಮಧೇನುಮಂಜುಳ ಗಾನ ಗೀತ ಪರಮ ವಿಖ್ಯಾತ ಸಂಜೀವನವ ತಂದ ವ್ಯೋಮ ಮಾರ್ಗದಿ ಬಂದಅಂಜದ ಗುಣವಂತನೆ ಹಣುವಂತನೆ1 ಶಶಿಧರಾನ್ವಯ ದೂತ ಸೌಮಿತ್ರಿಯ ವರೂಥ ಅಸಮಾಸ್ತ್ರಧೃತವೇದ ಅಮಿತ ಪ್ರಖ್ಯಾತ ಆ ಸುಗ್ರೀವ ಜಾಮಾತ ಮುಖ್ಯ ಪ್ರಾಣನಾಥ ವಿಶಾಲ ಗುಣವಂತನೆ ಹಣುವಂತನೆ 2 ಕ್ಷೋಣಿಯೊಳು ಕನಕದಾಸನ ನೆರಳು ಅನಕ ಏನು ಬಲಿಸಿದೆಯೊ ಔಷಧಿಯ ಕುಣುಕ ನೀನಿದ್ದರೆ ಕನಕ ಪ್ರಾಣ ತೆರಳುವ ತನಕ ಶ್ರೀನಿಧೇ ಆದಿಕೇಶವ ಎನ್ನ ಜನಕ3

Thoughts & Reflections

0

No reflections shared yet. Be the first to share your thoughts!

Share your thought