Bhasaka
← Back to home

ಕಾಯೊ ಎನ್ನನು ದೇವ

Author: ಕನಕದಾಸCategory: ಶ್ರೀಕೃಷ್ಣ
ಕಾಯೊ ಎನ್ನನು ದೇವ ಕಡೆ ಹಾಯಿಸೊ ಕಡಲೊಡೆಯ ಕಾಯಯ್ಯ ನೀ ಎನ್ನ ಕಮಲದಳಾಕ್ಷ ಒಂದು ಕಾಯಲಿ ನಾನು ಒಲಿದು ದಂಡಿಗೆಯಾದೆಎರಡು ಕಾಯಲಿ ನಾನು ವೀಣೆಯಾದೆಮೂರು ಕಾಯಲಿ ನಾನು ಮುದ್ದು ಕಿನ್ನರಿಯಾದೆನೀಟಾದ ಕಾಯಲಿ ನಾನು ನಾಗಸ್ವರವಾದೆ ||1|| ದಪ್ಪ ದಪ್ಪ ಕಾಯಲಿ ದರವೇಶಿಗಳಿಗಾದೆಮಿಕ್ಕ ಕಾಯಲಿ ನಾನು ಸನ್ನೇಸಿಗಳಿಗಾದೆಕೈತಪ್ಪಿ ಬಿದ್ದರೆ ಕದಿರಿಗೆ ಬಿಲ್ಲಾದೆಮತ್ತೆ ದೇವರ ಗುಡಿಗೆ ದೀಪವೇ ನಾನಾದೆ ||2|| ಚಿಕ್ಕಂದು ಮೊದಲು ನಾ ಸಾಸೂವೆ ಕಾಯಾದೆಚಿಕ್ಕ ಚಿನ್ಮಯಗೆ ಬುರುಡೆಯಾದೆಉಕ್ಕುವಾ ಹೊಳೆಯಲ್ಲಿ ತೆಪ್ಪವೇ ನಾನಾದೆಚೊಕ್ಕ ಕನಕಪ್ಪನ ಹಿಂದೆ ನಾ ತಿರುಪತಿಗೆ ಬಂದೆ||3||

Thoughts & Reflections

0

No reflections shared yet. Be the first to share your thoughts!

Share your thought