Bhasaka
← Back to home

ಕಾಯೊ ಕರುಣಾಕರನೆ

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ರೂಪಕತಾಳ
ಕಾಯೊ ಕರುಣಾಕರನೆ ಕಡುಪಾಪಿ ನಾನು ನ್ಯಾಯವೆಂಬುದು ಎನ್ನೊಳೆಳ್ಳನಿತಿಲ್ಲ ||ಪ|| ಎಣ್ಣೆಕೊಪ್ಪರಿಗೆಯೊಳ್ಬಿದ್ದು ಸ್ತುತಿಸಿದವನಲ್ಲ ಚಿನ್ನಕಶಿಪು ಬಾಧೆಗೊಳಗಾದವನಲ್ಲ ಬಣ್ಣಗೆಟ್ಟಡವಿಯಲಿ ತಪಸು ಮಾಡಿದವನಲ್ಲ ಹೆಣ್ಣನೊಲ್ಲದೆ ನಿನ್ನ ಬಂಟನಾದವನಲ್ಲ ||1|| ಒಲಿದು ದಾನವನಿತ್ತ ವೈರಿಕುಲದವನಲ್ಲ ಬಲು ಭಕುತಿಯ ದಾಸಿ ಪುತ್ರ ನಾನಲ್ಲ ಕಲಹದಲಿ ಪಣೆಗೆ ಬಾಣವ ನೆಡಿಸಿದವನಲ್ಲ ಕಳವಳದಿ ಕರೆದ ಪಾಂಚಾಲಿ ನಾನಲ್ಲ ||2|| ಉರಗರಾಜನ ತೆರದಿ ಹಾಸಿಗಾದವನಲ್ಲ ಗರುಡನಂದದಿ ಪೊತ್ತು ತಿರುಗಿದವನಲ್ಲ ಸಿರಿಧವನೆ ಕಾಗಿನೆಲೆಯಾದಿಕೇಶವ ನಿನ್ನ ಚರಣ ಡಿಂಗರಿಗ ಮಾತ್ರ ನಾನಾಗಿಹೆನೆಂದು ||3||

Thoughts & Reflections

0

No reflections shared yet. Be the first to share your thoughts!

Share your thought