Bhasaka
← Back to home

ಕುಲಕುಲವೆಂದು ಹೊಡೆದಾಡದಿರಿ

Author: ಕನಕದಾಸCategory: ಶ್ರೀಕೃಷ್ಣRaaga: ಪಂತುವರಾಳಿTaala: ಆಟತಾಳ
ಕುಲಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರ ||ಪ|| ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ ಅಟ್ಟು ಉಣ್ಣದ ವಸ್ತುಗಳಿಲ್ಲ ಗುಟ್ಟು ಕಾಣಿಸ ಬಂತು ಹಿರಿದೇನು ಕಿರಿದೇನು ನೆಟ್ಟನೆ ಸರ್ವಜ್ಞನ ನೆನೆ ಕಂಡ್ಯ ಮನುಜ ||1|| ಜಲವೆ ಸಕಲ ಕುಲಕ್ಕೆ ತಾಯಲ್ಲದೆ ಜಲದ ಕುಲವನೇನಾದರು ಬಲ್ಲಿರ ಜಲದ ಬೊಬ್ಬುಳಿಯಂತೆ ಸ್ಥಿರವಲ್ಲವೀ ದೇಹ ನೆಲೆಯನರಿತು ನೀ ನೆನೆ ಕಂಡ್ಯ ಮನುಜ ||2|| ಹರಿಯೆ ಸರ್ವೋತ್ತಮ ಹರಿಯೆ ಸರ್ವೇಶ್ವರ ಹರಿಮಯವೆಲ್ಲವೆನುತ ತಿಳಿದು ಸಿರಿ ಕಾಗಿನೆಲೆಯಾದಿಕೇಶವರಾಯನ ಚರಣ ಕಮಲವ ಕೀರ್ತಿಸುವನೆ ಕುಲಜ ||3||

Thoughts & Reflections

0

No reflections shared yet. Be the first to share your thoughts!

Share your thought