Bhasaka
← Back to home

ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು

Author: ಕನಕದಾಸCategory: ಇತರೆRaaga: ಮುಖಾರಿTaala: ಆಟತಾಳ
ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು ||ಪ|| ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿರೈ ||ಅ|| ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗ ಬೇರೊಂದು ಲಿಂಗ ಬೆಲೆ ಮಾಡಿ ತಂದು ತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿ ಯಾರ ಮನಕೊಪ್ಪಿಸುವರೀ ಶೀಲವಂತರು ||1|| ಲಿಂಗವೊಂದು ತನ್ನೊಳು ಲೀನವಾಗಿರುವಾಗ ಅಂಗಭವಿಗಳು ಕೂಡಿ ಆಡಿಕೊಂಬರು ಅಂಗದನುಭವದರ್ಥವನರಿಯದ ಇಂತಹ ಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ ||2|| ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲು ಆಗಮಿಸಿದ ಲಿಂಗವ ಬೆದಕಲೇತಕ್ಕೆ ಕಾಗಿನೆಲೆಯಾದಿಕೇಶವನೆ ನಾಗಶಯನ ನಾಗಿರಲು ಬೇರೊಂದನರಸಲೇತಕ್ಕೆ ||3||

Thoughts & Reflections

0

No reflections shared yet. Be the first to share your thoughts!

Share your thought