Bhasaka
← Back to home

ಕ್ಷಮಿಸುವುದೆಮ್ಮ ತಪ್ಪುಗಳ ಸ್ವಾಮಿ

Author: ಕನಕದಾಸCategory: ಶ್ರೀಕೃಷ್ಣRaaga: ಕಾನಡಾTaala: ಆಟತಾಳ
ಕ್ಷಮಿಸುವುದೆಮ್ಮ ತಪ್ಪುಗಳ ಸ್ವಾಮಿ ಕ್ಷಮಶೀಲವೆಂಬ ದಾಸೋಹ ಬಿರುದಿನೊಳು ||ಪ|| ಕಮಲಜ ಹರಿ ರುದ್ರ ವಿಮಲ ಸುರರು ಸಾಧು ಸಮರಲ್ಲವೆಂಬ ಶ್ರುತಿ ಸರಿಬಂತು ಸ್ವಾಮಿ ||ಅ|| ಶರಧಿಯೊಳಿರುತಿರ್ಪ ಚರಜೀವಿಗಳ ಗುಣಾ- ಕರಿಸಿ ಇಷ್ಟೆಂದು ಪೇಳಲುಬಹುದು ಸಿರಿವರದನ ಅಂತಃಕರಣಕೊಪ್ಪಿದ ನಿಮ್ಮ ಇರವ ತಿಳಿಯಲು ನರರ ವಶವೆ ಸ್ವಾಮಿ ||1|| ಆಢಕದೊಳಗಂಬರವನೆ ಅಳೆದು ಲೆಕ್ಕ ಕೂಡಿದ ಮಿತಿಯ ಪೇಳಲು ಬಹುದು ರೂಢಿಗೀಶನ ಸೇವೆ ಮಾಡಿದ ಮುಕ್ತರ ಈಡಿಲ್ಲವೆಂಬುದನಿತರರರಿವರೆ ಸ್ವಾಮಿ ||2|| ಈ ಶರೀರದೊಳಗಿಪ್ಪ ಕೇಶಗಳೆಲ್ಲವನು ಬೇಸರಿಸದೆಣಿಸಿ ಹೇಳಲು ಬಹುದು ಶೇಷಶಯನ ಕಾಗಿನೆಲೆಯಾದಿಕೇಶವ ದಾಸರ ಮಹಿಮೆ ಕಾಣಲಿಕಾಗದು ಸ್ವಾಮಿ ||3||

Thoughts & Reflections

0

No reflections shared yet. Be the first to share your thoughts!

Share your thought