Bhasaka
← Back to home

ಛೀ ನಿನ್ನ ಮೋರೆ ಮೇಲೆ

Author: ಕನಕದಾಸCategory: ಶ್ರೀಕೃಷ್ಣ
ಛೀ ನಿನ್ನ ಮೋರೆ ಮೇಲೆ - ಠೊಣ್ಯ ಛೀ ನಿನ್ನ ಮೋರೆ ಮೇಲೆ ಹೊತ್ತರೆದ್ದು ಮುಖ ತೊಳೆದು ಮನೆಮನೆ ಪೋಕರಿ ಅಲೆಯುತಿದ್ದೆ ವಿತ್ತ ಮದದಿ ಪರಸ್ತ್ರೀಯರ ಕಂಡು ಅರ್ತಿಬಡುತಲಿದ್ದೆ ಲೆತ್ತ ಪಗಡೆ ಚದುರಂಗ ಆಟದಲ್ಲೆ ಹೊತ್ತು ಕಳೆಯುತಿದ್ದೆ ನಿತ್ಯ ನಿತ್ಯ ಈ ಪರಿ ಆಯುಷ್ಯವ ವ್ಯರ್ಥ ಕಳೆಯುತಿದ್ದೆ ಠೊಣ್ಯ ||1|| ಕಂಡ ಕಂಡಲ್ಲಿಗೆ ಪೋಗಿ ಧನಂಗಳ ಕೊಂಡು ಬರುತ್ತಲಿದ್ದೆ ಹೆಂಡಿರು ಮಕ್ಕಳು ಹಿತದವರೆಂದು ಕೊಂಡಾಡುತಲಿದ್ದೆ ಖೋಡಿ ಮಾತುಗಳನು ಹೇಳಿ ಮಂದಿಯ ಕುಂಡೆ ಚಿವುಟುತಿದ್ದೆ ಭಂಡ ಬಾಳು ಇದು ರಂಡೆ ಗಂಡ ಕಂಡ್ಯ ಯಮನ ಬಾಧೆ ಠೊಣ್ಯ ||2|| ಮಾನವ ಜನ್ಮಕೆ ಬಂದು ಪುಣ್ಯ ಮತ್ತೇನೂ ಮಾಡದೆ ಹೋದೆ ದಾನವಾಂತ ಸತ್ಪಾತ್ರರಿಗೆ ನೀ ದೀನತ್ವವ ಪಡೆದೆ ಜ್ಞಾನಶೂನ್ಯ ಮದವೇರಿದ ಸೊಕ್ಕಿದ ಕೋಣಕೆ ಹುಟ್ಟಿದ್ದೆ ದೀನರಕ್ಷಕಾದಿಕೇಶವ ವಿಠಲಂಗೆ ನೀನತಿ ದೂರಾದೆ ಠೊಣ್ಯ ||3||

Thoughts & Reflections

0

No reflections shared yet. Be the first to share your thoughts!

Share your thought