Bhasaka
← Back to home

ಜಪವ ಮಾಡಿದರೇನು ತಪವ ಮಾಡಿದರೇನು

Author: ಕನಕದಾಸCategory: ಇತರೆRaaga: ಕಾಂಬೋಧಿTaala: ಝಂಪೆತಾಳ
ಜಪವ ಮಾಡಿದರೇನು ತಪವ ಮಾಡಿದರೇನು ವಿಪರೀತ ಕಪಟಗುಣ ಕಲುಷವಿದ್ದವರು ||ಪ|| ಆದಿಗುರುವರಿಯದೆ ಅತ್ತಲಿತ್ತಲು ತೊಳಲಿ ವೇದಶಾಸ್ತ್ರವನೋದಿ ಬಾಯಾರಲು ಹಾದಿಯನು ಕಾಣದಂತಿರುತಿರ್ದು ಹಲವೆಂಟು ವಾದ ತರ್ಕದೊಳಿದ್ದ ಭೇದವಾದಿಗಳು ||1|| ನುಡಿನಡೆವ ಕಾಲದಲಿ ದಾನ ಮಾಡದೆ ಇರಲು ಅಡವಿಯೊಳು ಕೆರೆತುಂಬಿ ಬತ್ತಿದಂತೆ ಮಡದಿ ಮಕ್ಕಳಿಗೆಂದು ಒಡವೆ ವಸ್ತ್ರವ ಗಳಿಸೆ ಹಿಡಿಯಲಾ ಯಮನವರ ಕಟ್ಟಿಗೊಳಗಾಗಿ ||2|| ಚಳಿಮಳೆಯ ಅತಿ ಕಾರುಗತ್ತಲೆಯೊಳಗೆ ಎದ್ದು ಹೊಳೆಯೊಳಗೆ ಮುಳುಗಿ ಜಪ ತಪವ ಮಾಡಿ ಕಳವಳಿಸಿ ನೂರೆಂಟು ಹಲುಬಿ ಬಳಲಲು ಬೇಡ ನಳಿನಾಕ್ಷ ಆದಿಕೇಶವನ ನೆನೆ ಮನವೆ ||3||

Thoughts & Reflections

0

No reflections shared yet. Be the first to share your thoughts!

Share your thought