Bhasaka
← Back to home

ಡಿಂಬದಲ್ಲಿ ಇರುವ ಜೀವ ಕಂಬಸೂತ್ರ

Author: ಕನಕದಾಸCategory: ವೈರಾಗ್ಯRaaga: ಕಾಂಬೋಧಿTaala: ಏಕತಾಲ
ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆ ಎಂದಿಗಿದ್ದರೊಂದು ದಿನ ಸಾವು ತಪ್ಪದು ||ಪ|| ಹುಟ್ಟುತೇನು ತಾರಲಿಲ್ಲ ಸಾಯುತೇನು ಒಯ್ಯಲಿಲ್ಲ ಸುಟ್ಟು ಸುಟ್ಟು ಸುಣ್ಣದ ಹರಳಾಯಿತೀ ದೇಹ ಹೊಟ್ಟೆ ಭಾಳ ಕೆಟ್ಟದೆಂದು ಎಷ್ಟು ಕಷ್ಟ ಪಟ್ಟರೂನು ಬಿಟ್ಟು ಹೋಗುವಾಗ ಗೇಣು ಬಟ್ಟೆ ಕಾಣದು ||1|| ಹತ್ತು ಎಂಟು ಲಕ್ಷ ಎಣಿಸಿ ಮತ್ತೆ ಸಾಲದೆಂದು ಪರರ ಅರ್ಥಕ್ಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರು ಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆ ಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ ||2|| ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲ ಅಣ್ಣ ತಮ್ಮ ತಾಯಿ ತಂದೆ ಬಯಸಲಾಗದು ಅನ್ನ ವಸ್ತ್ರ ಭೋಗಕ್ಕಾಗಿ ತನ್ನ ಸುಖವ ಕಾಣಲಿಲ್ಲ ಮಣ್ಣುಪಾಲು ಆದಮೇಲೆ ಯಾರಿಗಾಹುದೊ ||3|| ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡು ಅಳ್ಳಾಚಾರಿ ಗೊಂಬೆಯಂತೆ ಆಡಿಹೋಯಿತು ಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆ ಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು ||4|| ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯ ವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನು ಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲ ನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ ||5||

Thoughts & Reflections

0

No reflections shared yet. Be the first to share your thoughts!

Share your thought