Bhasaka
← Back to home

ತನು ನಿನ್ನದು ಜೀವನ ನಿನ್ನದು ರಂಗ

Author: ಕನಕದಾಸCategory: ಶ್ರೀಕೃಷ್ಣRaaga: ಕೇದಾರಗೌಳTaala: ಆಟತಾಳ
ತನು ನಿನ್ನದು ಜೀವನ ನಿನ್ನದು ರಂಗ ||ಪ|| ಅನುದಿನದಲಿ ಬಾಹೊ ಸುಖದುಃಖ ನಿನ್ನದಯ್ಯ ||ಅ|| ಸವಿನುಡಿ ವೇದ ಪುರಾಣ ಶಾಸ್ತ್ರಂಗಳ ಕಿವಿಗೊಟ್ಟು ಕೇಳುವ ಕಥೆ ನಿನ್ನದು ನವವಮೋಹನಾಂಗಿಯರ ರೂಪವನು ಕಣ್ಣಿಂದ ಎವೆಯಿಕ್ಕದೆ ನೋಡುವ ನೋಟ ನಿನ್ನದಯ್ಯ ||1|| ಒಡಗೂಡಿ ಗಂಧ ಕಸ್ತೂರಿ ಪರಿಮಳಂಗಳ ಬಿಡದೆ ಲೇಪಿಸಿಕೊಂಬುವುದು ನಿನ್ನದು ಷಡುರಸದನ್ನಕ್ಕೆ ನಲಿದಾಡುವ ಚಿಹ್ವೆ ಕಡು ರುಚಿಗೊಂಡರಾ ರುಚಿ ನಿನ್ನದಯ್ಯ||2|| ಮಾಯಾ ಪಾಶದ ಬಲೆಯೊಳಗೆ ಸಿಲುಕಿರುವ ಕಾಯ ಪಂಚೇಂದ್ರಿಯಂಗಳು ನಿನ್ನವು ಕಾಯಜಪಿತ ಕಾಗಿನೆಲೆಯಾದಿಕೇಶವ ರಾಯ ನೀನಲ್ಲದೆ ನರರು ಸ್ವತಂತ್ರರೆ ||3||

Thoughts & Reflections

0

No reflections shared yet. Be the first to share your thoughts!

Share your thought