Bhasaka
← Back to home

ತನ್ನ ಪ್ರಾಪ್ತಿಯ ಫಲವ ತಾನರಿಯದೆ

Author: ಕನಕದಾಸCategory: ಶ್ರೀಕೃಷ್ಣRaaga: ಕಾಂಬೋಧಿTaala: ಝಂಪೆತಾಳ
ತನ್ನ ಪ್ರಾಪ್ತಿಯ ಫಲವ ತಾನರಿಯದೆ ||ಪ|| ಇನ್ನು ನುಡಿವುದು ಮೂರ್ಖತನವಲ್ಲವೆ ||ಅ|| ಸರಸಿಜೋದ್ಭವನು ಫಣೆಯೊಳು ಬರೆದು ನಿರ್ಮಿಸಿದ ತೆರನೊಂದು ಬೇರುಂಟೆ ತಾನರಿಯದೆ ಕೆರಕೊಂಡು ಕಂಡವರ ಕೂಡೆ ತಾನಾಡಿದರೆ ನೆರೆ ದುಃಖವಿದು ಬಿಟ್ಟು ಕಡೆಗೆ ತೊಲಗುವುದೆ ||1|| ಬಡತನವು ಬಂದಲ್ಲಿ ಬಾಯಿ ಬಿಟ್ಟರೆ ಮುನ್ನ ಪಡೆದಂಥ ವಿಧಿ ಬೆನ್ನ ಬಿಡಲರಿವುದೆ ಅಡಿಗಡಿಗೆ ಶೋಕದಲಿ ಅವರಿವರಿಗುಸುರಿದರೆ ಬಡತನವು ತಾ ಬಿಟ್ಟು ಕಡೆಗೆ ಕದಲುವುದೆ ||2|| ದೆಸೆಗೆಟ್ಟು ನಾಡದೈವಂಗಳಿಗೆ ಎರಗಿದರೆ ನೊಸಲ ಬರೆಹವ ತೊಡೆದು ತಿದ್ದಲಳವೆ ವಸುಧೀಶ ಕಾಗಿನೆಲೆಯಾದಿಕೇಶವನಂಘ್ರಿ ಬಿಸಜವನು ಕಂಡು ನೀ ಸುಖಿಯಾಗು ಮನುಜ ||3||

Thoughts & Reflections

0

No reflections shared yet. Be the first to share your thoughts!

Share your thought