Bhasaka
← Back to home

ದಾನಧರ್ಮವ ಮಾಡಿ ಸುಖಯಾಗು ಮನವೆ

Author: ಕನಕದಾಸCategory: ಇತರೆRaaga: ಕೇದಾರಗೌಳTaala: ಅಟ್ಟ
ದಾನಧರ್ಮವ ಮಾಡಿ ಸುಖಿಯಾಗು ಮನವೆ ||ಪ|| ಹೀನ ವೃತ್ತಿಯಲಿ ನೀ ಕೆಡಬೇಡ ಮನವೆ ||ಅ|| ಎಕ್ಕನಾತಿ ಯಲ್ಲಮ್ಮ ಮಾರಿ ದುರ್ಗಿ ಚೌಡಿಯ ಅಕ್ಕರಿಂದಲಿ ಪೂಜೆ ಮಾಡಲೇಕೆ ಗಕ್ಕನೆಯೆ ಯಮನ ದೂತರೆಳೆದೊಯ್ಯುವಾಗ ಶಕ್ತೇರು ಬಿಡಿಸಿಕೊಂಡಾರೇನೊ ಮರುಳೆ ||1|| ಸಂಭ್ರಮದಲಿ ಒಂದ್ಹೊತ್ತು ನೇಮದೊಳಗಿದ್ದು ತಂಬಿಟ್ಟಿನಾ ದೀಪ ಹೊರಲೇತಕೆ ಕೊಂಬು ಹೋತು ಕುರಿ ಕೋಣಗಳನ್ನು ಬಲಿಗೊಂಬ ದೊಂಬಿ ದೈವಗಳ ಭಜಿಸದಿರು ಮನವೆ ||2|| ಚಿಗುರೆಲೆ ಬೇವಿನ ಸೊಪ್ಪುಗಳ ನಾರಸೀರೆ ಬಗೆಬಗೆಯಿಂದ ಶೃಂಗಾರ ಮಾಡಿ ನೆಗೆನೆಗೆದಾಡುತ ಕುಣಿಯುತಿರೆ ನಿನಗಿನ್ನು ಮಿಗಿಲಾದ ಮುಕ್ತಿಯುಂಟೇ ಹುಚ್ಚು ಮನವೆ ||3|| ದಾನಧರ್ಮ ಪರೋಪಕಾರವ ಮಾಡು ದೀನನಾಗಿ ನೀ ಕೆಡಬೇಡವೊ ಜ್ಞಾನವಿಲ್ಲದೆ ಹೀನ ದೈವವ ಭಜಿಸಿದರೆ ಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ ||4|| ನರಲೋಕದಲಿ ಯಮನ ಬಾಧೆಯನು ಕಳೆಯಲು ವರ ಪುಣ್ಯ ಕಥೆಗಳನು ಕೇಳುತಲಿ ಸಿರಿ ಕಾಗಿನೆಲೆಯಾದಿ ಕೇಶವನ ನೆರೆ ನಂಬಿ ಸ್ಥಿರ ಪದವಿಯನು ಪಡೆ ಹುಚ್ಚು ಮನವೆ ||5||

Thoughts & Reflections

0

No reflections shared yet. Be the first to share your thoughts!

Share your thought